ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಭೇಟಿ

ಕಾಪು : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಇಂದು ಭೇಟಿ ದೇವಿ ದರ್ಶನ ಪಡೆದರು.

ಅಂಗಾರಕ ಸಂಕಷ್ಟಹರ ಚತುರ್ಥಿಯ ಶುಭದಿನದಂದು ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸಂತೋಷ್ ಹೆಗ್ಡೆ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ, ಪುರೋಹಿತರಾದ ರಾಘವೇಂದ್ರ ಉಪಾಧ್ಯಾಯ, ಶ್ರೀನಿವಾಸ್ ಉಪಾಧ್ಯಾಯ, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಮೊದಲಾದವರು ಉಪಸ್ಥಿತರಿದ್ದರು.

Related posts

ಯಕ್ಷಗಾನ ವಿದ್ವಾಂಸ ಬಿ. ಗೋಪಾಲಕೃಷ್ಣ ಕುರುಪ್‌ ನಿಧನ

ಎಸೆಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿಯಲ್ಲಿ ವರ್ಡ್‌ಪ್ರೆಸ್ ಸಮುದಾಯ ಪ್ರಾರಂಭ