ನಿವೃತ್ತ ಪೊಲೀಸ್ ನಿರೀಕ್ಷಕ ಜಯಂತ್ ನಿಧನ

ಉಡುಪಿ : ನಿವೃತ್ತ ಪೊಲೀಸ್ ನಿರೀಕ್ಷಕ ಎಂ.ಜಯಂತ್(61) ಅವರು ಹೃದಯಾಘಾತದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು 1992ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಮಣಿಪಾಲ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ಆರಂಭಿಸಿದರು. ಬಳಿಕ ವಿವಿಧ ಹಂತಗಳಲ್ಲಿ ಭಡ್ತಿ ಹೊಂದಿ ಉಡುಪಿ ಮಹಿಳಾ ಠಾಣೆಯಲ್ಲಿ ಪೊಲೀಸ್‌ ನಿರೀಕ್ಷಕರಾಗಿ ನಿವೃತ್ತರಾಗಿದ್ದರು.

ಇವರು ಕೊಲ್ಲೂರು, ಸಂಚಾರಿ ಠಾಣೆ, ಶಿರ್ವ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು. ಹೆಬ್ರಿ ಮೂಲದ ಇವರು ಸಾಸ್ತಾನದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ