ಶಾಲಾ ಮಕ್ಕಳಿದ್ದ ರಿಕ್ಷಾ ಪಲ್ಟಿ – ಮೂವರಿಗೆ ಗಾಯ

ಮಣಿಪಾಲ : ಶಾಲಾ ಮಕ್ಕಳ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್‌ ಬಳಿ ಸಂಭವಿಸಿದೆ.

ಮಣಿಪಾಲ ಮಾಧವ ಕೃಪಾ ಶಾಲೆಯ ಮಕ್ಕಳನ್ನು ಸಂಜೆ ಮನೆಗೆ ಕರೆ ತರುತ್ತಿದ್ದ ವೇಳೆ ಮಣಿಪಾಲದಿಂದ ಪರ್ಕಳದ ಕಡೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾದಲ್ಲಿದ್ದ ಮೂವರು ಮಕ್ಕಳಿಗೆ ಗಾಯಗಳಾಗಿದೆ ಎನ್ನಲಾಗುತ್ತಿದೆ.

ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಎ.18ರಂದು “ಕೋರ” ಚಿತ್ರ ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಬಿಡುಗಡೆ

ಜೈಲಿನ ಜಾಮರ್‌ನಿಂದ ಸಾರ್ವಜನಿಕರ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ