ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಮೃತ್ಯು

ಹೆಬ್ರಿ : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವರಂಗ ಗ್ರಾಮದಲ್ಲಿ ಸಂಭವಿಸಿದೆ.

ಪಳ್ಳಿ ಗ್ರಾಮದ ವಿಶ್ವನಾಥ ಎಂಬವರು ಮೃತ ದುರ್ದೈವಿ. ಇವರು ರವಿ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿಯಿಂದ ಅಜೆಕಾರು ಕಡೆಗೆ ಬರುತ್ತಿರುವಾಗ ವರಂಗ ಗ್ರಾಮದ ಸೇತುವೆಯಿಂದ ಸ್ವಲ್ಪ ಮುಂದೆ ತಲುಪುವಾಗ ಅಜೆಕಾರು ಕಡೆಯಿಂದ ಹೆಬ್ರಿ ಕಡೆಗೆ ಸಾಗುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಸವರಾರಿಬ್ಬರು ರಸ್ತೆಗೆ ಬಿದ್ದು, ಗಾಯಗೊಂಡಿದ್ದರು. ವಿಶ್ವನಾಥ ಅವರು ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದು, ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯರು ಪರೀಕ್ಷಿಸಿ ವಿಶ್ವನಾಥ ಅವರು ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತ್ರೇಸಿಯಮ್ಮ ಎಂಬವರೂ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ