ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ಬೈಕ್ ನಡುವಿನ ಅಪಘಾತಕ್ಕೆ ಸವಾರ ಬಲಿ

ಬಂಟ್ವಾಳ : ರಾ.ಹೆ.75ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ.

ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ಸು ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ