ಮಣಿಪಾಲ : ರಿಟ್ಜ್ ಕಾರೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ತಡರಾತ್ರಿ 1.35 ರ ಸುಮಾರಿಗೆ ಸಂಭವಿಸಿದೆ.
ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಪೈಕಿಯವರ ಕಾರು ಇದಾಗಿದೆ ಎಂದು ತಿಳಿದು ಬಂದಿದೆ.

ಇಬ್ಬರು ವ್ಯಕ್ತಿಗಳು ಮಣಿಪಾಲದ ಬಬ್ಬುಸ್ವಾಮಿ ದೇವಸ್ಥಾನದ ಮುಂಭಾಗ ರಸ್ತೆ ಬದಿ ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರು. ಯಾವುದೋ ಕಾರಣಕ್ಕೆ ಕಾರಿನಲ್ಲಿ ಬೆಂಕಿ ಹತ್ತಿಕೊಂಡದ್ದು ಗೊತ್ತಾದ ತಕ್ಷಣ ಇಬ್ಬರೂ ಹೊರಗೆ ಬಂದು ಪಾರಾಗಿದ್ದಾರೆ. ಧಗಧಗಿಸಿ ಉರಿಯುತ್ತಿದ್ದಂತೆ ಕಾರು ಹಿಮ್ಮುಖವಾಗಿ ಚಲಿಸಿದೆ ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಲಾಯಿತು. ಅವರು ಬರುವಷ್ಟರಲ್ಲಿ ಕಾರು ಸಂಪೂರ್ಣ ಉರಿದು ಹೋಗಿತ್ತು ಎಂದು ತಿಳಿದುಬಂದಿದೆ.