ಅಕ್ರಮವಾಗಿ ಪರವಾನಿಗೆ ಇಲ್ಲದೆ ಬಂಡೆ ಸ್ಪೋಟ – ಇಬ್ಬರ ಬಂಧನ

ಬೈಂದೂರು : ಬೈಂದೂರು ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಹೊಳೆ ಗ್ರಾಮದ ಅರಮನೆ ಕೊಡ್ಲು ಎಂಬಲ್ಲಿ ಬಂಡೆ ಸ್ಪೋಟಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅನಂತಮೂರ್ತಿ ಭಟ್ ಮತ್ತು ಪ್ರವೀಣ್ ಬಂಧಿತರು.

ಅನಂತಮೂರ್ತಿ ಭಟ್ ಎಂಬುವರ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಕಲ್ಲು ಬಂಡೆಗಳನ್ನು ಸ್ಪೋಟಿಸಿದ್ದು ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸ್ಫೋಟ ನಡೆಸಿದ ಜಾಗದ ಮಾಲೀಕ ಅನಂತಮೂರ್ತಿ ಮತ್ತು ಅವರಿಗೆ ಸಹಕರಿಸಿದ ಪ್ರವೀಣ್‌ರನ್ನು ಶಂಕರನಾರಾಯಣ ಪೊಲೀಸ್ ಠಾಣೆ ಪಿಎಸ್ಐ ನಾಸಿರ್ ಹುಸೇನ್ ಹಾಗೂ ಸಿಬ್ಬಂದಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಾಸಕ ಸುನಿಲ್ ಕುಮಾರ್ ಸಹೋದರ ನಿಧನ

ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್‌ಪಾಲ್ ಸುವರ್ಣ ಆಕ್ರೋಶ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ