ಷೇರು ಟ್ರೇಡಿಂಗ್‌ ಹೆಸರಲ್ಲಿ 38,53,961 ರೂ. ವಂಚನೆ

ಮಂಗಳೂರು : ಫೇಸ್‌ಬುಕ್‌ನಲ್ಲಿ ಬಂದ ಷೇರು ಟ್ರೇಡಿಂಗ್‌ ಕುರಿತ ಜಾಹೀರಾತಿಗೆ ಸ್ಪಂದಿಸಿ 38,53,961 ರೂ. ಕಳೆದುಕೊಂಡಿರುವ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಫೇಸ್‌ಬುಕ್‌ನಲ್ಲಿ ಬಂದ ಲಿಂಕನ್ನು ತೆರೆದು ತಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ. ಅನಂತರ ಅಪರಿಚಿತನೊಬ್ಬ ಕರೆ ಮಾಡಿದ್ದು, ಷೇರು ಟ್ರೇಡಿಂಗ್‌ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ವರ್ಗಾವಣೆ ಮಾಡುವಂತೆ ತಿಳಿಸಿದ್ದಾನೆ. ಆತ ಕಳುಹಿಸಿದ ಯುಪಿಐ ಐಡಿಗಳಿಗೆ ಹಣ ವರ್ಗಾಯಿಸಿದ ಬಳಿಕ ಟ್ರೇಡಿಂಗ್‌ ಕಂಪೆನಿಯವರು ಕರೆ ಮಾಡಿ ಮಾಹಿತಿ ಹಾಗೂ ತರಬೇತಿ ನೀಡಿದ್ದಾರೆ.

ಹೆಚ್ಚು ಹಣ ತೊಡಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎನ್ನುವ ಆಮಿಷದಂತೆ ಹಂತ ಹಂತವಾಗಿ ವಿವಿಧ ಖಾತೆಗಳಿಂದ 38,53,961 ರೂ. ಪಾವತಿಸಿದ್ದಾರೆ. ಹಣವನ್ನು ಹಿಂಪಡೆಯಲು ಯತ್ನಿಸಿದಾಗ ಸಾಧ್ಯವಾಗಿಲ್ಲ. ಈ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ ಎಂದು ಕಾವೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ