ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ : ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಅಗಸ್ಟ್ 2024ರ ಮಾಹೆಯಲ್ಲಿ ಶೇ.50 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಓದುಗರು ಆನ್‌ಲೈನ್ http://www.kuvempubhashabharathi.karnataka.gov.in ಮೂಲಕ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿಯೂ ಕೂಡ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು, ಉಡುಪಿ ದೂರವಾಣಿ ಸಂಖ್ಯೆ: 0820- 2986168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ