ಸುಡುಮದ್ದು ಮಾರಾಟ : ತಾತ್ಕಾಲಿಕ ಪರವಾನಿಗೆಗೆ ಅರ್ಜಿ ಆಹ್ವಾನ

ಉಡುಪಿ : ದೀಪಾವಳಿ ಸಂದರ್ಭದಲ್ಲಿ (ಅ.30 ರಿಂದ ನ.2ರ ವರೆಗೆ ಮಾತ್ರ) ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರಿಂದ ಪರವಾನಿಗೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಜಿಲ್ಲಾಧಿಕಾರಿಗಳ ಕಚೇರಿಯಿಂದ ನಮೂನೆ ಪಡೆದು ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಗೆ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಪೇಕ್ಷಣ ಪತ್ರ ಪಡೆದು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕವಾಗಿ ಸುಡುಮದ್ದು ಮಾರಾಟ ಪರವಾನಿಗೆ ಸಿಗಲಿದೆ. ಅರ್ಜಿಗಳನ್ನು ಸೆ.20ರಿಂದ ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ಅ.15ರ ಒಳಗೆ ಸಲ್ಲಿಸಬೇಕು. ತಾಲೂಕು ಮಟ್ಟದ ಸಮಿತಿ ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ಮಾರಾಟ ಮಳಿಗೆಗಳನ್ನು ತೆರೆಯಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು