ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಮಂಗಳೂರು : ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2024ರ ಮಾರ್ಚ್‌ ತಿಂಗಳ 23ರಂದು ತನ್ನ ವಾಟ್ಸಪ್‌ ಖಾತೆಗೆ ಅಲಿಸ್‌-ಎಲ್‌ಆರ್‌ಸಿ ಎಂಬ ವಾಟ್ಸಪ್‌ ಗ್ರೂಪ್‌ ಲಿಂಕ್‌ ಬಂದಿತ್ತು. ಆ ಗ್ರೂಪಿಗೆ ಸೇರಿದ ಬಳಿಕ ಡಿಸ್ಕೌಂಟ್‌ ಬೆಲೆಗೆ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇಪದೆ ಸಂದೇಶ ಬರುತ್ತಿತ್ತು. ಇದನ್ನು ನಂಬಿ ತಾನು ಕಂಪೆನಿಯ ಖಾತೆಯಲ್ಲಿ ಹೂಡಿಕೆ ಮಾಡುವ ಸಲುವಾಗಿ ತನ್ನ ಬ್ಯಾಂಕ್‌ ಖಾತೆಗಳಿಂದ ಆರೋಪಿಗಳು ನೀಡಿದ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 17.57 ಲಕ್ಷ ರೂಪಾಯಿಯನ್ನು ವರ್ಗಾಯಿಸಿರುತ್ತೇನೆ ಎಂದು ಮೋಸ ಹೋದವರು ದೂರಿನಲ್ಲಿ ತಿಳಿಸಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ