ಮಗನ ಹುಟ್ಟು ಹಬ್ಬಕ್ಕಾಗಿ ಕಡವೆ ಹತ್ಯೆ : ಕೋವಿ ಹಾಗೂ ಕಡವೆ ಮಾಂಸ ವಶಕ್ಕೆ

ಉಪ್ಪಿನಂಗಡಿ : ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್‌ನಲ್ಲಿ ಇರಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡವು ಪತ್ತೆ ಹಚ್ಚಿದ್ದು, ಸ್ವಾಧೀನಪಡಿಸಿಕೊಳ್ಳಲಾಗಿದೆ.

ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಫ್ರೀಝರ್‌ನಲ್ಲಿ ಇರಿಸಲಾಗಿತ್ತು.

ಆದರೆ ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್‌, ಶಿವಾನಂದ ಅ‌ವರ ತಂಡ ಸುರೇಶ್‌ ಮನೆಗೆ ದಾಳಿ ನಡೆಸಿದ್ದಾರೆ.

ಈ ವೇಳೆಯಲ್ಲೂ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟ ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Related posts

ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಮೃತ್ಯು

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ