ದ.ಕ ಜಿಲ್ಲೆಯಲ್ಲಿ ನಾಳೆ(ಆ.1)ರಂದು ಶಾಲಾ ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ನಾಳೆ (ಆ.1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ‌ಮುಗಿಲನ್ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಆಗಸ್ಟ್ 1ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ