ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

ಉಡುಪಿ : ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಬಳಿ ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.

ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸ್ಥಳೀಯ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ನಂದಿಸುವಲ್ಲಿ ಯಶಸ್ವಿಯಾದರು. ಇವರ ಸಮಯಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಮತ್ತು ಇತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ