ಡಿವೈಡರ್‌‌ಗೆ ಢಿಕ್ಕಿ ಹೊಡೆದ ಸ್ಕೂಟರ್‌ – ಸಹಸವಾರ ಸಾವು, ಸವಾರ ಗಂಭೀರ

ಬೈಂದೂರು : ನಿಯಂತ್ರಣ ತಪ್ಪಿದ ಸ್ಕೂಟರೊಂದು ಡಿವೈಡರ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಬಾರ್‌ ಮುಂಭಾಗದ ಫ್ಲೈ ಓವರ್‌ ರಸ್ತೆಯಲ್ಲಿ ಸಂಭವಿಸಿದೆ.

ಮೃತ ಸಹಸವಾರನನ್ನು ಅಬ್ದುಲ್‌ ಮುನೀರ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಸವಾರ ಅಬ್ದುಲ್‌ ನಝೀರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಪ್ಪುಂದದಿಂದ ಶಿರೂರಿಗೆ ಹೋಗುತ್ತಿದ್ದ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದಲ್ಲಿರುವ ಡಿವೈಡರ್‌‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅಬ್ದುಲ್‌ ಮುನೀರ್‌ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ.

ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ