ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಾಗೃತಿ ಜಾಥಾ

ಕಾರ್ಕಳ : ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಸಚ್ಚೇರಿಪೇಟೆಯ ಕಬ್ & ಬುಲ್ ಬುಲ್, ಹಾಗೂ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಂದ ಕಾರ್ಕಳ ಸಚ್ಚರಿಪೇಟೆ ಲಯನ್ಸ್ ಸ್ಕೂಲ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ಅಭಿಯಾನದ ಬಗ್ಗೆ ಜಾಥಾ ಕಾರ್ಯಕ್ರಮವನ್ನು ಆ.10 ಶನಿವಾರದಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಮುಖ್ಯ ಶಿಕ್ಷಕರಾದ ಶ್ರೀಯುತ ಗೌರವ್ ಆರ್.ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಸಾಂಕ್ರಾಮಿಕ ರೋಗಗಳನ್ನು ತಡೆಯುವ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಸಚ್ಚೇರಿಪೇಟೆಯ ಅಂಗಡಿಗಳಿಗೆ ತೆರಳಿ ಕರಪತ್ರಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕಬ್ ಬುಲ್ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮೀ ಶೆಟ್ಟಿಗಾರ್, ಶಿಕ್ಷಕ – ಶಿಕ್ಷಕಿಯರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ