ಬಜೆಟ್‌ನಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಎಸ್‌‌ಡಿ‌ಪಿ‌ಐ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ

ಉಡುಪಿ : ರಾಜ್ಯ ಬಜೆಟ್ ಅನ್ನು ಮಾರ್ಚ್ ತಿಂಗಳಲ್ಲಿ ಸಿದ್ಧರಾಮಯ್ಯ‌ನವರು ಮಂಡಿಸಲಿದ್ದು ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಪೂರೈಸಲು ಬಜೆಟ್‌ನಲ್ಲಿ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ನಝೀರ್ ಅಹಮದ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿಯಾದ ನಿಯೋಗ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳಾದ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜುಗಳನ್ನು ನಿರ್ಮಿಸಬೇಕು, ಜಿಲ್ಲೆಯಲ್ಲಿ ಸುಮಾರು ಎಂಟು ಶೇ.ರಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಪ್ರತಿ ತಾಲೂಕುಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಬೇಕು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ವಸತಿ ಶಾಲೆಗಳನ್ನು ನಿರ್ಮಿಸಬೇಕು, ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು. ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು, ದೇಶದಲ್ಲೇ ಖ್ಯಾತಿಯನ್ನು ಗಳಿಸಿರುವ ಜಿಲ್ಲೆಯ ವಿಶೇಷ ಕೃಷಿಗಳಾದ ಮಟ್ಟು ಗುಳ್ಳ ಹಾಗೂ ಉಡುಪಿ ಮಲ್ಲಿಗೆ ಬೆಳೆಗಳಿಗೆ ಪ್ರೋತ್ಸಾಹ ನೀಡಬೇಕು, ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನುದಾನವನ್ನು ಮೀಸಲಿಡಬೇಕು ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಎಸ್‌ಡಿ‌ಪಿ‌ಐ ಉಡುಪಿ ಜಿಲ್ಲಾ ಮುಖಂಡರಾದ ಹಸೈನಾರ್ ಕಟಪಾಡಿ, ಎಸ್‌ಡಿ‌ಪಿ‌ಐ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಅಶ್ರಫ್ ಬಾವ, ಉಪಾಧ್ಯಕ್ಷರಾದ ರಹೀಮ್ ಆದಿಉಡುಪಿ ಉಪಸ್ಥಿತರಿದ್ದರು.

Related posts

ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಜಾತಿ ನಿಂದನೆ ಹಲ್ಲೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ

ಕಾಡು ಪ್ರಾಣಿಗಳ ಬೇಟೆ : ಇಬ್ಬರ ಬಂಧನ…!