ಉಡುಪಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಕಾಪು ಪೇಟೆ, ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕ, ಗಂಗೊಳ್ಳಿ ಹಾಗೂ ಕಂಡ್ಲೂರಿನಲ್ಲಿ ಕ್ಯಾಂಡಲ್ ಲೈಟ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ SDPI ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಶಾಹಿದ್ ಆಲಿ ಈ ಭಯೋತ್ಪಾದನಾ ಕೃತ್ಯವನ್ನು ನಾವು ಖಂಡಿಸುತ್ತಿದ್ದೇವೆ ಹಾಗೂ ಈ ಘಟನೆಗೆ ಸಂಬಂಧಿಸಿ ನಿಷ್ಪಕ್ಷಪಾತ ತನಿಖೆಯಾಗಬೇಕು ಹಾಗೂ ಇದರ ಹಿಂದೆ ಇರುವ ಷಡ್ಯಂತರವನ್ನು ಬಯಲಿಗೆಳೆಯಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಹಾಗೂ ಕ್ಷೇತ್ರ ಸಮಿತಿ ನಾಯಕರು ಭಾಗವಹಿಸಿದ್ದರು.