ನೂಲ ಹುಣ್ಣಿಮೆ ದಿನ ಮಲ್ಪೆಯಲ್ಲಿ ಮತ್ಸ್ಯ ಸಮೃದ್ಧಿಗಾಗಿ ಸಮುದ್ರ ಪೂಜೆ

ಉಡುಪಿ : ಪ್ರತೀ ವರ್ಷದಂತೆ ಈ ಬಾರಿಯೂ ನೂಲ ಹುಣ್ಣಿಮೆಯಂದು ಮಲ್ಪೆ ಕಡಲ ಕಿನಾರೆ ಸಹಿತ ಕರಾವಳಿಯ ವಿವಿಧ ಕಡೆಗಳಲ್ಲಿ ಸಮುದ್ರ ಪೂಜೆ ನೆರವೇರಿಸಲಾಯಿತು. ಮಲ್ಪೆ ಮೀನುಗಾರರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಮುದ್ರ ಪೂಜೆ ನಡೆಸಲಾಯಿತು.

ಬೆಳಿಗ್ಗೆ ವಡಭಾಂಡ ಬಲರಾಮ ಹಾಗೂ ಬೊಬ್ಬರ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮೀನುಗಾರರೆಲ್ಲರು ಶೋಭಾಯಾತ್ರೆಯಲ್ಲಿ ತೆರಳಿ ವಡಭಾಂಡೇಶ್ವರ ಸಮುದ್ರ ತೀರದಲ್ಲಿ ಪೂಜೆ ನೆರವೇರಿಸಿ ಹಾಲು, ಫಲಪುಷ್ಪ, ಸೀಯಾಳವನ್ನು ಸಮುದ್ರ ರಾಜನಿಗೆ ಸಮರ್ಪಿಸಿದರು.

ಕಡಲ ಮಕ್ಕಳು ಜಿಲ್ಲೆಯ ವಿವಿಧೆಡೆ ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು. ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಲಿ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸಲಾಯಿತು.

ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಕಾರ್ಯದರ್ಶಿ ಜಗನ್ನಾಥ್ ಕಡೆಕಾರ್, ಕೋಶಾಧಿಕಾರಿ ಪ್ರಕಾಶ್ ಬಂಗೇರ, ಮೀನುಗಾರ ಮುಖಂಡರಾದ ಜಯ ಸಿ. ಕೋಟ್ಯಾನ್, ಹರಿಯಪ್ಪ ಕೋಟ್ಯಾನ್, ಎಚ್.ಟಿ ಕಿದಿಯೂರು, ಕೃಷ್ಣಪ್ಪ ಸುವರ್ಣ, ಸತೀಶ್ ಕುಂದರ್, ಶೇಖರ್ ಕೋಟ್ಯಾನ್, ಶಿವಪ್ಪ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು