ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಹಿರಿಯಡಕ : ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಎಂದು ಗುರುತಿಸಲಾಗಿದೆ.

ನಯನ ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಜುಲೈ 22 ರಂದು ಬೆಳಿಗ್ಗೆ ಚೂಡಿದಾರ ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !