ಬಿಜೆಪಿ ಹಿರಿಯ ನಾಯಕ, ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಉಡುಪಿ/ಶಿವಮೊಗ್ಗ : ಬಿಜೆಪಿಯ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಸೋಮವಾರ ಹೃದಯಾಘಾತದಿಂದ ನಿಧನರಾದರು.

ರಾಜ್ಯ ಸರಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್ ಭಾಷಣ ಮಾಡಿದ ಬಳಿಕ ಅಲ್ಲೇ ಕುಸಿದು ಬಿದ್ದರು.

ತಕ್ಷಣ ಅವರನ್ನು ಸಮೀಪದ ಮ್ಯಾಕ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರು

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ- ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಕ್ಲಷ್ಟರ್‌ ಉಸ್ತುವಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ