ಉಡುಪಿ : ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ. ಇವರು ಹಿರಿಯ ಬಸ್ ಏಜೆಂಟ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಬಾವಿಯಿಂದ ಬಂದ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು. ಅಗ್ನಿಶಾಮಕ ಇಲಾಖೆ ಬಾವಿಯಲ್ಲಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದರು. ತಕ್ಷಣವೇ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮಂಜುನಾಥ್ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.