ಕಾಂಗ್ರೆಸ್‌ ಹಿರಿಯ ಮುಖಂಡ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಗೋಪಾಲ ಕೃಷ್ಣ ಶೆಟ್ಟಿ ನಿಧನ

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ತೆಂಕನಿಡಿಯೂರಿನ ಕಿರಣ್ ಮಿಲ್ಕ್ ಸಂಸ್ಥೆಯ ಮಾಲಕ ಟಿ. ಗೋಪಾಲಕೃಷ್ಣ ಶೆಟ್ಟಿ(77) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.

ಇವರು ತಾಲೂಕು ಪಂಚಾಯತ್ ಸದಸ್ಯರಾಗಿ, ಸ್ಥಳೀಯವಾಗಿ ಸಾಮಾಜಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರಗಳಿಗೆ ಪ್ರೋತ್ಸಾಹಕರಾಗಿ ಜನಮೆಚ್ಚುಗೆ ಪಡೆದಿದ್ದರು. ಪ್ರಸುತ್ತ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗೌರವ ಸಲಹೆಗಾರರಾಗಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related posts

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಮತ್ಸ್ಯಗಂಧ ರೈಲಿನಲ್ಲಿ ಲಕ್ಷಾಂತರ ಮೌಲ್ಯದ ವಜ್ರಾಭರಣ ಕಳವು – ದೂರು ದಾಖಲು