ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ – ಮಹಜರು ಪ್ರಕ್ರಿಯೆ ನಡೆಸುತ್ತಿರುವ ಪೊಲೀಸರು

ಹೆಬ್ರಿ : ಉಡುಪಿ ಹೆಬ್ರಿಯ ಪೀತ್‌ಬೈಲ್ ಎಂಬಲ್ಲಿ ಸೋಮವಾರ ತಡರಾತ್ರಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ದಳ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದಂಡೇ ಆಗಮಿಸಿದೆ.

ಆಂತರಿಕ ಭದ್ರತಾ ಡಿಜಿಪಿ ರೂಪಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪೊಲೀಸರು ಘಟನಾ ಸ್ಥಳದ ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ‌ವನ್ನು ಕರೆಸಿಕೊಳ್ಳಲಾಗಿದೆ. ಬೆರಳಚ್ಚು ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಈ ಭಾಗದ ಪ್ರಭಾವಿ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್‌ನಿಂದಾಗಿ ನಕ್ಸಲ್ ನಿಗ್ರಹ ಪಡೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗೆ ಬಹುದೊಡ್ಡ ಗೆಲುವು ಸಿಕ್ಕಿದಂತಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ