ಉಡುಪಿ : ಉಡುಪಿಯ ಬೀಡನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಟ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್, ಸಿದ್ದಪ್ಪ, ಗುರು, ಪರಶುರಾಮ ಬಂಧಿತರು. ಇವರನ್ನು ವಶಕ್ಕೆ ಪಡೆದು ಆರೋಪಿಗಳು ಆಟಕ್ಕೆ ಬಳಸಿದ 32,800 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 49/2025 ಕಲಂ: 87 ಕರ್ನಾಟಕ ಪೊಲೀಸ್ ಕಾಯಿದೆ & ಕಲಂ : 112 BNS ರಂತೆ ಪ್ರಕರಣ ದಾಖಲಾಗಿದೆ.