ಲೈಂಗಿಕ ಕಿರುಕುಳ ಪ್ರಕರಣ – ಅರುಣ್ ಕುಮಾರ್ ಪುತ್ತಿಲಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು : ಲೈಂಗಿಕ ಆರೋಪದಲ್ಲಿ ಮಹಿಳೆಯೋರ್ವರು ದೂರು ನೀಡಿದ ಹಿನ್ನಲೆಯಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಮವಾರ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರುಣ್ ಪುತ್ತಿಲ ವಿರುದ್ದ ಎಫ್ಐಆರ್ ದಾಖಲಿಸಿದ್ದರು.

ತನ್ನ ವಿರುದ್ದ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಸೋಮವಾರ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ಬಳಿಕ ಮಾದ್ಯಮ‌ಕ್ಕೆ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ ಅವರು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ