ಬಾಲಕಿಗೆ ಲೈಂಗಿಕ ಕಿರುಕುಳ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಫೀಕ್ ಯಾನೆ ಮಹಮ್ಮದ್ ಅಫೀಕ್ (19) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಮಾಡಿ ಅಲ್ಲಿ ಮೂವರು ಆರೋಪಿಗಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ‌ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿದ್ದು ಇನ್ನೋರ್ವ ಪ್ರಮುಖ ಆರೋಪಿ ನಾಪತ್ತೆಯಾಗಿದ್ದ.

ಇದೀಗ ನಾಪತ್ತೆಯಾಗಿದ್ದ ಪ್ರಮುಖ ಆರೋಪಿಯಾಗಿದ್ದ ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಪ್ರಕರಣದ ಇನ್ನೆರಡು ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ.

ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಹಮ್ಮದ್ ಅಫೀಕ್‌ನ ಬಂಧನಕ್ಕೆ ಪೋಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ‌ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ