ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತೀಕಾರವಾಗಿ ಉಳ್ಳಾಲದಲ್ಲಿ ಶಮೀರ್ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳು ಬಂಧನ

ಉಳ್ಳಾಲ : ಆಗಸ್ಟ್ 11ರ ರಾತ್ರಿ 10 ಗಂಟೆ ಸುಮಾರಿಗೆ ಕಲ್ಲಾಪು ವಿ.ಕೆ. ಫರ್ನಿಚರ್ ಬಳಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಮೃತ ಮೊಹಮ್ಮದ್ ಸಮೀರ್ ಅಲಿ ಕಳೆದ 2018ರಲ್ಲಿ ಆರೋಪಿ ಮೊಹಮ್ಮದ್ ನೌಷಾದ್‌ನ ಸಂಬಂಧಿ ಟಾರ್ಗೆಟ್ ಇಲಿಯಾಸ್‌ನನ್ನು ಕೊಲೆ ಮಾಡಿದ್ದನು. ಈ ಸೇಡು ತೀರಿಸಿಕೊಳ್ಳಲು ನಡೆದ ಈ ಘಟನೆಯಲ್ಲಿ ಐವರು ಆರೋಪಿಗಳು ಭಾಗಿಯಾಗಿದ್ದಾರೆ.
ಮೊಹಮ್ಮದ್ ನೌಷಾದ್, ನಿಯಾಜ್, ತನ್ನೀರ್ ತನ್ನು, ಮೊಹಮ್ಮದ್ ಇಸ್ತಾಲ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಬಳಸಿದ ವಾಹನ ಸೇರಿದಂತೆ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಧನ್ಯ ನಾಯಕ್ ನೇತೃತ್ವದಲ್ಲಿ ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಹೆಚ್.ಎನ್. ಮತ್ತು ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳು ಬಂಧಿಸಲ್ಪಟ್ಟಿದ್ದಾರೆ.

ಮೊಹಮ್ಮದ್ ನೌಷಾದ್ ವಿರುದ್ಧ ಅಪಹರಣ, ಎನ್‌ಡಿಪಿಎಸ್ ಕಾಯ್ದೆ ಉಲ್ಲಂಘನೆ, ಸುರತ್ಕಲ್ ಮತ್ತು ಸಕಲೇಶಪುರ ಠಾಣೆಯಲ್ಲಿ ಹತ್ಯೆ ಪ್ರಯತ್ನ ಪ್ರಕರಣಗಳು ದಾಖಲಾಗಿವೆ. ತನ್ವೀರ್ ತನ್ನು ಬಂಟ್ವಾಳ ಠಾಣೆಯಲ್ಲಿ ಜಾನುವಾರು ಕಳ್ಳತನ ಮತ್ತು ದರೋಡೆ ಪ್ರಯತ್ನ ಪ್ರಕರಣದ ಆರೋಪಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ತನಿಖೆ ನಡೆಯುತ್ತಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ