ಜಿಲ್ಲೆಯಲ್ಲಿ ಮುಂದುವರೆದ ಮಳೆ; ಕಡೆಕಾರಿನಲ್ಲಿ ಶಾರದಾ ಪೂಜಾರ್ತಿ ಮನೆ ಗೋಡೆ ಕುಸಿತ, ಅಪಾರ ನಷ್ಟ

ಉಡುಪಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ಹಾನಿ ಸಂಭವಿಸಿದೆ. ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆಗುಡ್ಡೆ ಕುತ್ಪಾಡಿ ಶಾರದಾ ಪೂಜಾರ್ತಿ ಅವರ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಮನೆಯಲ್ಲಿ 10 ಜನ ವಾಸವಾಗಿದ್ದು, ಅದೃಷ್ಟವಶಾತ್ ಯಾರಿಗೂ ಅಪಾಯ ಸಂಭವಿಸಿಲ್ಲ. ಮನೆಯೊಳಗಿನ ದಾಖಲೆ ಪತ್ರ, ಮಕ್ಕಳ ಪುಸ್ತಕ, ಬಟ್ಟೆ ಬರೆ ಸಂಪೂರ್ಣ ನಾಶವಾಗಿದೆ.

ಜಿಲ್ಲೆಯ ಹಲವೆಡೆ ಗಾಳಿ ಮಳೆಯಿಂದಾಗಿ ಕೃಷಿ, ತೋಟಗಾರಿಕೆ ಬೆಳೆಗಳಿಗೆ ಹಾನಿ ಸಂಭವಿಸಿದೆ. ಕುಂದಾಪುರ ಪುರಸಭೆ ವ್ಯಾಪ್ತಿ ಖಾರ್ವಿಕೇರಿಯಲ್ಲಿ ಮನೆಯ ಮೇಲೆ ತೆಂಗಿನ ಮರ ಬಿದ್ದು ಮೂವರು ಗಾಯಗೊಂಡ ಘಟನೆ ಸಂಭವಿಸಿದೆ. ಬುಧವಾರ ಬೆಳಗ್ಗಿನಿಂದ ಮಧ್ಯಾಹ್ನದ‌ವರೆಗೂ ಮಳೆ ಬಿಡುವು ಪಡೆದಿದ್ದು, ಮಧ್ಯಾಹ್ನದ ಬಳಿಕ ಎಲ್ಲೆಡೆ ಬಿಟ್ಟುಬಿಟ್ಟು ನಿರಂತರ ಮಳೆಯಾಗಿದೆ. ಉಡುಪಿ, ಕಾರ್ಕಳ, ಬೈಂದೂರು, ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆ ಹೆಚ್ಚು ಮಳೆ ಸುರಿದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ 16ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.ಕುಂದಾಪುರ ತಾಲೂಕಿನ ಅಂಪಾರು, ಮೊಳಹಳ್ಳಿ, ಹಾಲಾಡಿ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೃಷಿ ಬೆಳೆ ನಷ್ಟವಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ