ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದೆಂದ ಐವನ್ ಡಿಸೋಜಾ ಹೇಳಿಕೆಗೆ ಶರಣ್ ಪಂಪ್‌ವೆಲ್ ತೀವ್ರ ಖಂಡನೆ

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ವಿಹೆಚ್‌ಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಐವನ್ ಡಿಸೋಜಾ ಹೇಳಿಕೆ ಖಂಡನೀಯ, ಇದು ದೇಶದ್ರೋಹದ ಹೇಳಿಕೆಯಾಗಿದೆ. ಇದು ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನವಾಗಿದ್ದು ಪೊಲೀಸ್ ಇಲಾಖೆ ತಕ್ಷಣ ಇವರ ಮೇಲೆ ಕೇಸು ದಾಖಲಿಸಲು ಆಗ್ರಹಿಸುತ್ತೆನೆ.

ಈ ಹೇಳಿಕೆ ಬ್ರಿಟಿಷರ – ಮೊಗಲರ ಮನಸ್ಥಿತಿಯನ್ನು ತೋರಿಸುತ್ತಿದ್ದು, ರಾಜ್ಯದಲ್ಲಿ ದಂಗೆ ಎಬ್ಬಿಸುವ ಹುನ್ನಾರವಾಗಿದೆ, ರಾಜ್ಯದ ಜನಪ್ರತಿನಿಧಿಯಾಗಲು ಇವನು ನಾಲಾಯಕ್, ಈ ಹೇಳಿಕೆ ಐವನ್ ಡಿಸೋಜಾಗೆ ದುಬಾರಿಯಾಗಲಿದೆ ಎಂದಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ