ಶಿರೂರು ಗುಡ್ಡ ಕುಸಿತ ಪ್ರಕರಣ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಖುದ್ದು ಸ್ಥಳ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗುಡ್ಡ ಕುಸಿತ ದುರಂತದಲ್ಲಿ 10 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಈವರೆಗೆ 7 ಜನರ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದರು.

ಗುಡ್ಡ ಕುಸಿತದಲ್ಲಿ ಹಲವರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದಾರೆ. ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಕುಟುಂಬಕ್ಕೆ ನಾವು ಎಷ್ಟೇ ಧೈರ್ಯ, ಪರಿಹಾರ ನೀಡಿದರೂ ಕಳೆದುಕೊಂಡವರನ್ನು ವಾಪಾಸ್ ತರಲಾಗದು. ಆದರೂ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ