ಅಂತರ್ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಶಿವಾನಿ ಶೆಟ್ಟಿ ಆಯ್ಕೆ

ಉಡುಪಿ : ಶಿವಾನಂದ ಶೆಟ್ಟಿ ಮತ್ತು ಸುಜಾತ ಶೆಟ್ಟಿ ಹೆಬ್ರಿ ಇವರ ಪುತ್ರಿ, ವಿದ್ಯೋದಯ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಉಡುಪಿ ಇದರ ಏಳನೇ ತರಗತಿ ವಿಧ್ಯಾರ್ಥಿನಿ ಹಾಗೂ ರಾಷ್ಟ್ರ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ, ಬಹುಮುಖ ಪ್ರತಿಭೆಯ ಕುಮಾರಿ ಶಿವಾನಿ ಶೆಟ್ಟಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಎಸ್‌ಜಿ‌ಎಸ್ ಅಂತರ್ ರಾಷ್ಟ್ರೀಯ ಯೋಗ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಜರುಗಿದ ಅಂತರ್ ರಾಜ್ಯ ಯೋಗಾಸನ ಸ್ಪರ್ಧೆಯಲ್ಲಿ ಉತ್ಕೃಷ್ಟ ಪ್ರದರ್ಶನ ನೀಡಿ ಅಂತರ್ ರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆ ಆಗಿದ್ದಾಳೆ. ಇವಳಿಗೆ ಯೋಗ ತರಬೇತಿಯನ್ನು ಕೆ. ನರೇಂದ್ರ ಕಾಮತ್ ಕಾರ್ಕಳ ಇವರು ನೀಡಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ