ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ಧಿ ಕೇಳಿ ದಿಗ್ಭ್ರಮೆಯಾಗಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕನ್ನಡದ‌ ಬೆಳ್ಳಿತೆರೆ, ಕಿರುತೆರೆಯಲ್ಲಿ ನಟಿಸಿದ್ದ ಅಪರ್ಣಾರವರು, ಲಕ್ಷಾಂತರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರು‌.

ನಾನು ಸಚಿವೆಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿದ್ದರು. ಆತ್ಮೀಯ ಗೆಳತಿ ಅಪರ್ಣಾ ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ.

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ