ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯಾಲಯದಲ್ಲಿ ಮೌನ ಪ್ರಾರ್ಥನೆ

ಉಡುಪಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಕೋಲ್ಕತ್ತಾದಲ್ಲಿ ದಾರುಣವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ವೈದ್ಯೆಗೆ ನ್ಯಾಯ ಸಿಗಲಿ ಎಂದು ಶುಕ್ರವಾರ ನ್ಯಾಯಾಲಯದ ಸಭಾಂಗಣದಲ್ಲಿ ಮೌನ ಪ್ರಾರ್ಥನೆ ನಡೆಸಲಾಯಿತು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ಪುರುಷೋತ್ತಮ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್.ಎಸ್.ಗಂಗಣ್ಣನವರ್, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್, ವೈದ್ಯಾಧಿಕಾರಿಗಳಾದ ಡಾ.ಸ್ವಸ್ತಿಕ್, ಡಾ.ಮಾಣಿಕ್, ವಕೀಲರು, ನ್ಯಾಯಾಲಯದ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ