ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ

ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು.

ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದ್ದೆ. ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.

ಸಮಿತಿಯ ಅಧ್ಯಕ್ಷರಾದ ದಿಲ್‌ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು. ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ, ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್, ಕೋಶಾಧಿಕಾರಿ ವಿಶ್ವನಾಥ್, ದೇವಸ್ಥಾನ‌ದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

Related posts

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours