ಸಿಂಧೂರ್ ಕಾರ್ಯಾಚರಣೆ ಯಶಸ್ವಿ – ಶಾಸಕರ ನೇತೃತ್ವದಲ್ಲಿ ವಿಶೇಷ ಪೂಜೆ

ಉಡುಪಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಹಿಂದೂಗಳ ಮಾರಣಹೋಮಗೈದ ಉಗ್ರರ ವಿರುದ್ಧ ‘ಆಪರೇಶನ್ ಸಿಂಧೂರ್’ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ವೀರ ಯೋಧರ ಶ್ರೇಯಸ್ಸಿಗಾಗಿ ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ನಗರ ಹಾಗೂ ದೇಶಾಭಿಮಾನಿಗಳ ವತಿಯಿಂದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ, ಶತ್ರು ರಾಷ್ಟ್ರ ಪಾಕಿಸ್ತಾನ ಮತ್ತು ಉಗ್ರರಿಗೆ ತಕ್ಕ ಶಾಸ್ತಿ ಮಾಡಿದ್ದಕ್ಕೆ ಹರ್ಷ ವ್ಯಕ್ತವಾಯಿತು. ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ