ಮನೆಯಿಂದ ಹೋದ ಸಹೋದರಿಯರು ವಾಪಾಸು ಬಾರದೆ ನಾಪತ್ತೆ

ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿರುತ್ತಾರೆ.

ಮಲ್ಲಿಕಾ (18 ವರ್ಷ) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಹತ್ತನೇ ತರಗತಿ‌ವರೆಗೆ ಶಾಲೆಗೆ ಹೋಗಿದ್ದು, ಬಳಿಕ ಮನೆಯಲ್ಲಿಯೇ ಇರುತ್ತಾರೆ. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ