ಎಸ್‌.‌ವಿ.ಟಿ.ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಿಕ್ಷಣ ಇಲಾಖೆಯ ವತಿಯಿಂದ ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್‌.‌ವಿ.ಟಿ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ ವಾಣಿ ಸಂಗಪ್ಪ, 8ನೇ ತರಗತಿಯ ಧನ್ಯಶ್ರೀ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಪಂದ್ಯಾಟದಲ್ಲಿ 9ನೇ ತರಗತಿಯ ಮುತ್ತುರಾಜ್ ದ್ವಿತೀಯ ಸ್ಥಾನ ಹಾಗೂ 10ನೇ ತರಗತಿಯ ಪ್ರೇಕ್ಷಾ ಮತ್ತು 9ನೇ ತರಗತಿಯ ಪೂಜಾ ಕೆ. ತೃತೀಯ ಸ್ಥಾನ ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರಿಯಾ ಪ್ರಭು, ಪ್ರಭಾವತಿ, ತರಬೇತುದಾರ ಅಕ್ಷತ್, ಕೀರ್ತನ ತರಬೇತಿಯನ್ನು ನೀಡಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯ ನೇಮಿರಾಜ್ ಶೆಟ್ಟಿ, ಮುಖ್ಯ ಶಿಕ್ಷಕ ಯೋಗೇಂದ್ರ ನಾಯಕ್, ಕಾಲೇಜಿನ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.

Related posts

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್