ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ : ಉಡುಪಿ ಸಮೀಪದ ಕುಂತಳನಗರ ಮಣಿಪುರದಲ್ಲಿರುವ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೆರವೇರಿತು.

ಕಾರ್ಯಕ್ರಮವನ್ನು ಉದ್ಯಮಿ ಸಾಣೂರು ಗುತ್ತು ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಯುವ ಸಮುದಾಯಕ್ಕೆ ಉತ್ತಮ ಅವಕಾಶ ನಿರ್ಮಿಸಿಕೊಡುವುದು ಸಾಮಾನ್ಯ ಮಾತಲ್ಲ. ಕುಂತಳನಗರ ಮಣಿಪುರದಲ್ಲಿರುವ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರವು ಅತ್ಯುತ್ತಮ ಕಾರ್ಯ ಮಾಡುತ್ತಿದೆ. ಮಕ್ಕಳು ಅವಕಾಶವನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕೋಶಾಧಿಕಾರಿ ವಿಜಿತ್ ಶೆಟ್ಟಿ ಮಾತನಾಡಿ, ಈಗಾಗಲೇ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರವು ನೂರಾರು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಿದೆ. ಮೂರು ಬಾರಿ ಎಂಆರ್ಜಿ ಸಂಸ್ಥೆಯ ಡಾ. ಪ್ರಕಾಶ್ ಶೆಟ್ಟಿಯವರ ನೇತೃತ್ವದಲ್ಲಿ ಮೂರು ಬಾರಿ ಉದ್ಯೋಗ ಮೇಳ ಆಯೋಜಿಸಿದ್ದು, ಎರಡು ಸಾವಿರಕ್ಕೂ ಅಧಿಕ ಮಂದಿ ಉದ್ಯೋಗ ಪಡೆದಿದ್ದಾರೆ ಎಂದರು.

ಪ್ರೊ. ವಿದ್ಯಾರಾಣಿಯವರು ಸಂಸ್ಥೆಯ ಈ ವರೆಗಿನ ತರಬೇತಿ ಮತ್ತು ಉದ್ಯೋಗ ಮೇಳದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭ ಸಾಣೂರು ಗುತ್ತು ದೇವಿಪ್ರಸಾದ್ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಪ್ರಾಂಶುಪಾಲ ಮಿಥುನ್ ಚಕ್ರವರ್ತಿ, ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್ಬಿ ಶೆಟ್ಟಿ, ಪದ್ಮನಾಭ ಹೆಗ್ಡೆ, ಕಾರ್ತಿಕ್ ಶೆಟ್ಟಿ, ರಂಜನಿ ಹೆಗ್ಡೆ, ಡಾ. ಸುಧೀರ್ ರಾಜ್, ಶ್ರೀಮತಿ ರಶ್ಮಿ, ಹರೀಶ್ ಶೆಟ್ಟಿ, ರಮೇಶ್ ಶೆಟ್ಟಿ ನಿಂಜೂರು, ಅಶೋಕ್ ಕುಮಾರ್ ಶೆಟ್ಟಿ ಕೆಮ್ತೂರು ಉಪಸ್ಥಿತರಿದ್ದರು.

Related posts

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ