ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ

ಕಟಪಾಡಿ : ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕಟಪಾಡಿ ಗ್ರಾ.ಪಂ.ನಲ್ಲಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಕಟಪಾಡಿ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿರುವ ಅವರು ವಿವಿಧ ದೇವಸ್ಥಾನ, ದೈವಸ್ಥಾನಗಳಲ್ಲಿ ಜೀರ್ಣೋದ್ದಾರ ಸಮಿತಿಗಳಲ್ಲಿ ತೊಡಗಿಸಿಕೊಂಡಿದ್ದರು.

ಸಾಮಿಲ್ ಉದ್ಯಮಿಯಾಗಿದ್ದು, ಸಾಮಿಲ್ ಉಡುಪಿ ಜಿಲ್ಲಾ ಯೂನಿಯನ್ ಅಧ್ಯಕ್ಷರಾಗಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ