Wednesday, January 15, 2025
Banner
Banner
Banner
Home » ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ : ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ : ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

by NewsDesk

ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್‌ಗೆ ಸೂಚನೆ ನೀಡಿದ್ದಾರೆ.

ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13‌ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕುಸುಮ್ ಯೋಜನೆಯಡಿ ದೇಶದೆಲ್ಲೆಡೆ ಸೋಲಾರ್ ಪಾರ್ಕ್‌ಗಳನ್ನು ಸ್ಥಾಪಿಸಿ ಗ್ರೀನ್ ಎನರ್ಜಿಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಜಾಗ ಗುರುತಿಸುವಂತೆ ಸಚಿವಾಲಯದಿಂದ ಮೆಸ್ಕಾಂಗೆ ಪತ್ರ ಬಂದಿದೆ. ಹೀಗಾಗಿ, ಒಂದು ವಾರದೊಳಗೆ ಕಡಬ ತಾಲೂಕು ವ್ಯಾಪ್ತಿಯಲ್ಲಿ ಪಿಎಂ ಕುಸುಮ್ ಸೋಲಾರ್ ಪಾರ್ಕ್ ಸ್ಥಾಪನೆಗೆ ಸೂಕ್ತ ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ಅದರ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡುವಂತೆ ಸಂಸದರು ತಹಶಿಲ್ದಾರರಿಗೆ ಸೂಚಿಸಿದ್ದಾರೆ.

ಸಂಸದರು ತಾಲೂಕಿನ ಜನತೆಯ ಕುಂದು-ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದ ವೇಳೆ, ಕಡಬಕ ತಾಲೂಕಿನ ಕೋಡಿಂಬಾಳದ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಿದರೆ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಮನವಿ ನೀಡಿದ್ದಾರೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಂಸದರು, ಸಂಬಂಧಪಟ್ಟವರ ಜತೆಗೆ ಚರ್ಚಿಸಿ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಶ್ರಮಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.

ಸಂಸದರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಮಿನಿ ವಿಧಾನ ಸೌದದಲ್ಲಿ ಜನಜಂಗುಲಿ ನೆರೆದಿತ್ತು. ಸಣ್ಣಪುಟ್ಟ ಕೆಲಸ ಕಾರ್ಯಗಳಿಗೆ ಜನರನ್ನು ಅಲೆದಾಡಿಸದಂತೆ ಇದೇ ಸಂಧರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಬಿ.ಜೆ.ಪಿ ಪ್ರಮುಖರಾದ ಪುಲಸ್ತ್ಯ ರೈ, ಪ್ರಕಾಶ್ ಎನ್.ಕೆ, ಮಧುಸೂದನ್ ಕೊಂಬಾರು, ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಸುರೇಶ್ ದೆಂತಾರು, ರಮೇಶ ಕಲ್ಪುರೆ, ಆಶೋಕ್ ನೆಕ್ಕರೆ, ವಾಡ್ಯಪ್ಪ ಗೌಡ, ಸದಾಶಿವ ಶೆಟ್ಟಿ ಮಾರಂಗ, ಲಕ್ಷೀಶ ಪೆಲತ್ತಾರು, ಸೇರಿದಂತೆ ಹಲವು ಮಂದಿ ಬಿ.ಜೆ.ಪಿ ಪ್ರಮುಖರು, ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb