ಕೊರಗ ಸಮುದಾಯದ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಸ್ಪೀಕರ್ ಖಾದರ್; ಸತ್ಯಾಗ್ರಹ ಕೈಬಿಡಲು ಮನವಿ – ಬೇಡಿಕೆ ಈಡೇರಿಸುವ ಭರವಸೆ

ಉಡುಪಿ : ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು 10 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಇಂದು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರು ಪ್ರತಿಭಟನಾಕಾರರನ್ನು ಮನವೊಲಿಸಿ ಸತ್ಯಾಗ್ರಹ ಹಿಂಪಡೆಯುವಂತೆ ಆಗ್ರಹಿಸಿದರು. ಈ ವೇಳೆ ಕೊರಗ ಸಮುದಾಯದ ನಾಯಕಿ ಸುಶೀಲ ನಾಡ ಅವರು ಸ್ಪೀಕರ್ ಖಾದರ್ ಅವರ ಬಳಿ ಸಮುದಾಯದ ವಿದ್ಯಾವಂತರಿಗೆ ಸರ್ಕಾರಿ ಉದ್ಯೋಗ ಮತ್ತು ಭೂಮಿಯ ಹಕ್ಕುಪತ್ರಗಳನ್ನು ನೀಡುವಂತೆ ಒತ್ತಾಯ ಮಾಡಿದರು. ಕೊರಗ ಸಮುದಾಯದ ಮನವಿಯನ್ನು ಆಲಿಸಿದ ಸ್ಪೀಕರ್ ಖಾದರ್ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದರು.

ಬಳಿಕ ಮಾದ್ಯಮದ ಜೊತೆ ಮಾತನಾಡಿ, ಕೊರಗ ಸಮುದಾಯದವರು ಇಲ್ಲಿನ ಮೂಲ ನಿವಾಸಿಗಳು. ಅವರ ಹಕ್ಕುಗಳ ಬಗ್ಗೆ ನಮಗೆ ಗೌರವ ಇದೆ. ಸರಕಾರಿ ಉದ್ಯೋಗ ನೀಡಲು, ಅದರದ್ದೇ ಆದ ನಿಯಮಗಳಿವೆ. ಆದರೆ ಸರಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡುವಾಗ ಕೊರಗ ಸಮುದಾಯವನ್ನು ಪರಿಗಣಿಸಲಾಗುವುದು. ಆಗಸ್ಟ್ ನಂತರ ಈ ಸಂಬಂಧ ಸಮಲೋಚನಾ ಸಭೆ ನಡೆಸಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು