ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಸ್ಪೀಕರ್ ಖಾದರ್‌, ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಕುಂದಾಪುರ : ಎರಡು ದಿನಗಳ ಹಿಂದೆ ಹುತಾತ್ಮರಾಗಿದ್ದ ಯೋಧ ಅನೂಪ್ ಪೂಜಾರಿ ಅವರ ಬೀಜಾಡಿಯ ಮನೆಗೆ ಸ್ಪೀಕರ್‌ ಯು.ಟಿ.ಖಾದರ್‌ ಶುಕ್ರವಾರ ರಾತ್ರಿ ಭೇಟಿ ನೀಡಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಸ್ಪೀಕರ್ ಜೊತೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಕೂಡ ಇದ್ದರು.

ಈ ಸಂದರ್ಭ ಮಾತನಾಡಿದ ಖಾದರ್‌, ಬೀಜಾಡಿ ಕಡಲ ತೀರದಲ್ಲಿ ಅನೂಪ್‌ ಪೂಜಾರಿ ಅವರ ಸ್ಮಾರಕ ನಿರ್ಮಿಸಲು ಸಹಕಾರ ನೀಡಲಾಗುವುದು. ಅನೂಪ್‌ ಪೂಜಾರಿ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಮಾತನಾಡಿ ಸರಕಾರದಿಂದ ಒದಗಿಸಬಹುದಾದ ಸವಲತ್ತು ಹಾಗೂ ಪರಿಹಾರ ನೀಡು‌ವುದಾಗಿ ಹೇಳಿದರು. ಮೃತರ ಪತ್ನಿ ಪದವೀಧರೆಯಾಗಿದ್ದು, ಅವರಿಗೆ ಸರಕಾರಿ ಕೆಲಸ ಕೊಡಿಸಬೇಕು ಎಂದು ಕುಂದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಖಾದರ್‌ ಹೇಳಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ