ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ

ಮಂಗಳೂರು : ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.

ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ, ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.

ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಉಪಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ – ಡಿಕೆಶಿಯಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ