ವಿಶೇಷ ಮಕ್ಕಳ ಕ್ರೀಡಾಕೂಟ – ಕಾರ್ಕಳದ ವಿಜೇತ ಶಾಲೆಗೆ ಚಾಂಪಿಯನ್‌ಶಿಪ್

ಉಡುಪಿ : ಮಂಗಳೂರು ವಿಶ್ವ ವಿದ್ಯಾಲಯ ಮತ್ತು ಉಡುಪಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ ವತಿಯಿಂದ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಕ್ರೀಡಾಕೂಟದಲ್ಲಿ ವಿಜೇತ ವಿಶೇಷ ಶಾಲೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಒಟ್ಟು 47 ವಿದ್ಯಾರ್ಥಿಗಳು ಭಾಗವಹಿಸಿದ್ದು, 19 ಚಿನ್ನದ ಪದಕ, 30 ಬೆಳ್ಳಿ ಪದಕ ಹಾಗೂ 19 ಕಂಚಿನ ಪದಕಗಳನ್ನು ಸೇರಿ 68 ಪದಕಗಳನ್ನು ಗೆದ್ದುಕೊಂಡಿದ್ದಾರೆ ಮತ್ತು ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ ಶೆಟ್ಟಿ ಪ್ರಶಸ್ತಿಗಳನ್ನು ವಿತರಿಸಿದರು. ರಾಜ್ಯ ವಿಶೇಷ ಶಿಕ್ಷಕ/ ಶಿಕ್ಷಕೇತರರ ಸಂಘ ರಾಜ್ಯಾಧ್ಯಕ್ಷೆ, ವಿಜೇತ ಶಾಲೆಯ ಸಂಸ್ಥಾಪಕಿ ಡಾ. ಶಾಂತಿ ಹರೀಶ್, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಆಗ್ನೇಸ್ ಕುಂದರ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ