ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಯಶ್‌ಪಾಲ್ ಸುವರ್ಣ

ಉಡುಪಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ನೆರವೇರಿಸಿದರು.

ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಶತಮಾನೋತ್ಸವ ಆಚರಣೆಯ ಸಂಭ್ರಮದಲ್ಲಿರುವ ಶಾಲೆಯ ಶಿಕ್ಷಕರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಮನವಿಯ ಮೇರೆಗೆ 2 ಕೊಠಡಿಗಳನ್ನು 20 ಲಕ್ಷ ವೆಚ್ಚದಲ್ಲಿ ಶಾಸಕರ ನಿಧಿ ಹಾಗೂ ದಾನಿಗಳ ಸಹಕಾರದಿಂದ ಶೀಘ್ರದಲ್ಲಿ ನಿರ್ಮಾಣಗೊಳ್ಳಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಆದ್ಯತೆಯೊಂದಿಗೆ ಸದಾ ಸಹಕಾರ ನೀಡುವ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶತಮಾನೋತ್ಸವ ಸಂಭ್ರಮದ ವಿಜ್ಞಾಪನೆ ಪತ್ರವನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮದ ಅಧ್ಯಕ್ಷರಾದ ಸಂತೋಷ್ ಜತ್ತನ್, ದಾನಿಗಳಾದ ನ್ಯೂ ಕರ್ನಾಟಕ ಬಿಲ್ಡರ್ಸ್‌ನ ಚೇತನ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸದಾನಂದ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುಳಾ ಜಯಕರ್, ಹೇರೂರು ಎಜುಕೇಷನ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ದೀಪಾ ಚೇತನ್ ಕುಮಾರ್ ಶೆಟ್ಟಿ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಚಂದ್ರಕಲಾ, ಶತಮಾನೋತ್ಸವ ಸಂಭ್ರಮದ ಕಾರ್ಯದರ್ಶಿ ಅಶೋಕ್ ಹೇರೂರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಶೋಕ್ ಅಮೀನ್, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕಾಮತ್, ಮೀರಾ ಸದಾನಂದ, ಹೇಮ ಅಶೋಕ್, ಆನಂದ ಪೂಜಾರಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ್ ಕುಲಾಲ್, ಸಚಿನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಉಡುಪಿ ನಗರ ಪೊಲೀಸರ ರಾತ್ರಿ ಕಾರ್ಯಾಚರಣೆ – ಅಕ್ರಮ ಚಟುವಟಿಕೆ ನಡೆಸುವವರಿಗೆ ವಾರ್ನಿಂಗ್

ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕಠಿಣ ಕ್ರಮ : ಅಧಿಕಾರಿಗಳಿಗೆ ಉಡುಪಿ ಡಿಸಿ ಕಟ್ಟುನಿಟ್ಟಿನ ಸೂಚನೆ

ನ್ಯಾಯಾಲಯದ ಆವರಣದಲ್ಲಿ ವಕೀಲರ ದಿನಾಚರಣೆ – ನ್ಯಾಯಮೂರ್ತಿಗಳಿಗೆ ಸನ್ಮಾನ