ಮಕರ ಸಂಕ್ರಮಣ ಪ್ರಯುಕ್ತ ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಉಡುಪಿ : ಮಕರ ಸಂಕ್ರಮಣ ಹಾಗೂ ವಾರಾಂತ್ಯದ ಸರಣಿ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ/ಕಾರವಾರಕ್ಕೆ ಜನವರಿ 10ರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ.

ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮನವಿಯಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದಾರೆ.

ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಜನವರಿ 10ರ ಮಧ್ಯಾಹ್ನ 1ಕ್ಕೆ ಹೊರಡಲಿದ್ದು, ಪಡೀಲ್‌ ಬೈಪಾಸ್‌ ಮೂಲಕ ರಾತ್ರಿ 12ಕ್ಕೆ ಉಡುಪಿ, 1 ಗಂಟೆಗೆ ಕುಂದಾಪುರಕ್ಕೆ ಬಂದು, ಬಳಿಕ ಕಾರವಾರ ಕಡೆಗೆ ಸಂಚರಿಸಲಿದೆ. ಈ ರೈಲು ಜನವರಿ 11ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಬೆಂಗಳೂರಿಗೆ ಸಂಚರಿಸಲಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ