ಕ್ರೀಡಾ ತಾರೆ ಹೆಬ್ರಿ ಗ್ರಾಮ ಆಡಳಿತಾಧಿಕಾರಿ ನವೀನ್‌ ಕುಮಾರ್‌ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಹೆಬ್ರಿ : ಕ್ರೀಡಾ ತಾರೆಯಾಗಿರುವ ಹೆಬ್ರಿ ಗ್ರಾಮ ಆಡಳಿತಾಧಿಕಾರಿ ನವೀನ್‌ ಕುಮಾರ್‌ ಅವರನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಕಂದಾಯ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು.

ಉಡುಪಿಯಲ್ಲಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ 2೦೦ ಮೀಟರ್‌ ಹರ್ಡಲ್ಸ್‌ನಲ್ಲಿ ಪ್ರಥಮ, 100 ಮೀಟರ್‌ ಹರ್ಡಲ್ಸ್‌ ಪ್ರಥಮ, ಹೈಜಂಪ್‌‌ನಲ್ಲಿ ದ್ವೀತಿಯ ಪ್ರಶಸ್ತಿ, ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ 11೦ ಮೀಟರ್‌ ಹರ್ಡಲ್ಸ್‌‌ನಲ್ಲಿ ಪ್ರಥಮ ಪ್ರಶಸ್ತಿ ಪಡೆದ ಚಂಡೀಗಢದಲ್ಲಿ ನಡೆದ ರಾಷ್ಟ್ರಮಟ್ಟದ 1೦೦ ಮೀಟರ್‌ ಹರ್ಡಲ್ಸ್‌‌ನಲ್ಲಿ 5 ಸ್ಥಾನ ಪಡೆದಿದ್ದಾರೆ.

ಗ್ರಾಮೀಣ ಪ್ರತಿಭೆಯಾಗಿರುವ ನವೀನ್‌ ಕುಮಾರ್‌ ಸೇವೆಯಲ್ಲಿ ಜನಮೆಚ್ಚುಗೆ ಪಡೆದು ನಿಷ್ಠಾವಂತ ಅಧಿಕಾರಿಯಾಗಿದ್ದಾರೆ. ಕಂದಾಯ ಇಲಾಖೆಯ ಜೊತೆಗೆ ನಾಡಿಗೆ ಕೀರ್ತಿ ತಂದಿದ್ದಾರೆ. ರಾಷ್ಟ್ರ ಮಟ್ಟದ ಸಿವಿಲ್‌ ಸರ್ವಿಸ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌‌ನಲ್ಲಿ ವೈಯಕ್ತಿಕ ಸಾಧನೆ ಮಾಡಿದ್ದಾರೆ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸತತ 4 ವರ್ಷಗಳಿಂದ ವೈಯಕ್ತಿಕ ಚಾಂಪಿಯನ್‌ ಶಿಪ್‌ ಸಾಧನೆ ಮಾಡುತ್ತಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಸನ್ಮಾನಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿಎಸ್‌, ಕುಂದಾಪುರ ಸಹಾಯಕ ಕಮೀಷನರ್‌ ರಶ್ಮಿ, ಹೆಬ್ರಿ ತಹಶೀಲ್ಧಾರ್‌ ಪ್ರಸಾದ್‌ ಎಸ್‌ಎ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ