ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ‌ಗುಡ್ಡೆಯಲ್ಲಿ ಜುಲೈ 12ರಂದು ಪರಿವಾರ ಶಕ್ತಿ ಪ್ರತಿಷ್ಠಾಪನೆ ಶ್ರೀ ಮಹಾ ಚಂಡಿಕಾಯಾಗ

ಉಡುಪಿ : ದೊಡ್ಡಣ‌ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಶ್ರೀ ನಾಗಾಲಯದ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಪರಿವಾರ ಶಕ್ತಿಯಾಗಿ ಶ್ರೀ ಪ್ರಸನ್ನಾಕ್ಷಿಯ ಪ್ರತಿಷ್ಠಾಪನೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಶ್ರೀಯುತ ಗಣೇಶ ಸರಳಾಯ ಅವರ ನೇತೃತ್ವದಲ್ಲಿ ನೆರವೇರಲಿದೆ.

ಆ ಪ್ರಯುಕ್ತ ಕ್ಷೇತ್ರದಲ್ಲಿ ಪ್ರತಿಷ್ಠಾ ಪೂರ್ವಭಾವಿ ಕಾರ್ಯಕ್ರಮವಾಗಿ ವಾಸ್ತು ಹೋಮ ರಾಕ್ಷೋಜ್ಞ ಹೋಮ ಪ್ರಕಾರ ಬಲಿ ಪ್ರಸಾದ ಶುದ್ಧಿ, ಸಂಕೋಚ ಹಾಗೂ ಆದಿವಾಸ ಪ್ರಕ್ರಿಯೆಗಳು ತಾರೀಕು ಹನ್ನೊಂದರ ಗುರುವಾರದಂದು ಸಂಜೆ ನೆರವೇರಲಿದೆ.

ತಾರೀಕು 12ರ ಶುಕ್ರವಾರದಂದು ಬೆಳಿಗ್ಗೆ ಆದ್ಯ ಗಣಪತಿ ಹೋಮ, ಪಂಚ ವಿಂಶತಿ ಕಲಶಾರಾಧನೆ, ಪ್ರತಿಷ್ಠ ಪ್ರಧಾನ ಹೋಮ, ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶಾಭಿಷೇಕ ಶ್ರೀ ಮಹಾ ಚಂಡಿಕಾ ಯಾಗ, ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಮಹಾ ಅನ್ನಸಂತರ್ಪಣೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮಾ ನಾಗರಾಜ್ ತಿಳಿಸಿರುತ್ತಾರೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!