‘ಶ್ರೀಕೃಷ್ಣ ಮಾಸೋತ್ಸವ’ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುವ ಶ್ರೀಕೃಷ್ಣ ಮಾಸೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರಾಜಾಂಗಣದಲ್ಲಿ ನಡೆಯಿತು.

ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡುತ್ತಾ, ಈ ಬಾರಿ ಉಡುಪಿಯ ಪ್ರಸಿದ್ಧ ಹಬ್ಬವಾದ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಅತ್ಯಂತ ವೈಭವದಿಂದ ಮಾಸೋತ್ಸವ, ಡೋಲೋತ್ಸವ, ಲಡ್ಡೂತ್ಸವ ಎಂಬಿತ್ಯಾದಿಯಾಗಿ ಹಲವು ವಿಧದಲ್ಲಿ ಆಚರಿಸಲು ಸಂಕಲ್ಪಿಸಲಾಗಿದೆ ಎಂದರು.

ವಿದ್ವಾಂಸರ ಸಭೆಯಲ್ಲಿ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಈ ಶ್ರೀಕೃಷ್ಣ ಮಾಸೋತ್ಸವ‌ದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಪುತ್ತಿಗೆ ಕಿರಿಯ ಶ್ರೀಪಾದರು, ಮಠದ ಆಡಳಿತ ವರ್ಗದವರು, ವಿದ್ವಾಂಸರು ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು